Category: ಕ್ರೀಡೆ

  • ಗೋವಾದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಗೌತಮ್ ಶೆಟ್ಟಿ – ಶಾಲಿನಿ ಶೆಟ್ಟಿ ಜೋಡಿಗೆ ಕಂಚಿನ ಪದಕ

    ಗೋವಾದಲ್ಲಿ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಗೌತಮ್ ಶೆಟ್ಟಿ – ಶಾಲಿನಿ ಶೆಟ್ಟಿ ಜೋಡಿಗೆ ಕಂಚಿನ ಪದಕ

    ಕುಂದಾಪುರ ಮಿರರ್ ಸುದ್ದಿ…

    ಗೋವಾ: ಮಾರ್ಚ್ 18 ರಿಂದ 25ರವರೆಗೆ ಗೋವಾದಲ್ಲಿ ನಡೆದ “ಆಲ್ ಇಂಡಿಯಾ ಯೋನೆಕ್ಸ್ ಸನ್‌ರೈಸ್ 48ನೇ ಮಾಸ್ಟರ್ಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್” ನಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ಜೋಡಿ ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

    ದೇಶದ ವಿವಿಧ ರಾಜ್ಯಗಳಿಂದ ಬಂದ ಶ್ರೇಷ್ಠ ಆಟಗಾರರ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಈ ಜೋಡಿ ಶಿಸ್ತಿನ ಆಟ, ಸಮನ್ವಯ ಮತ್ತು ದಿಟ್ಟ ಮನೋಭಾವದೊಂದಿಗೆ ಗಮನಾರ್ಹ ಸಾಧನೆ ಮಾಡಿದೆ. ಪ್ರತಿ ಪಂದ್ಯದಲ್ಲಿಯೂ ಆತ್ಮವಿಶ್ವಾಸದಿಂದ ಕಣಕ್ಕಿಳಿದ ಗೌತಮ್ ಮತ್ತು ಶಾಲಿನಿ, ತಮ್ಮ ಕೌಶಲ್ಯವನ್ನು ತೋರಿಸಿ ಸೆಮಿಫೈನಲ್ ಹಂತದವರೆಗೆ ಮುನ್ನಡೆದು ಕೊನೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.

    ಈ ಸಾಧನೆ ಕೇವಲ ಇವರ ವೈಯಕ್ತಿಕ ಯಶಸ್ಸಷ್ಟೇ ಅಲ್ಲ, ಕರ್ನಾಟಕದ ಬ್ಯಾಡ್ಮಿಂಟನ್ ಕ್ಷೇತ್ರಕ್ಕೂ ಹೆಮ್ಮೆ ತಂದಿದೆ. ಇವರ ಈ ಸಾಧನೆ ಯುವ ಆಟಗಾರರಿಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ.

    ಗೌತಮ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿಯವರ ಈ ಸಾಧನೆಗೆ ಕ್ರೀಡಾ ವಲಯದಿಂದ ಪ್ರಶಂಸೆ ವ್ಯಕ್ತವಾಗಿದ್ದು, ಭವಿಷ್ಯದಲ್ಲಿಯೂ ಇವರು ಇನ್ನಷ್ಟು ಪದಕಗಳನ್ನು ಗೆದ್ದು ರಾಜ್ಯದ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಗಿದೆ.

  • ಸಾಸ್ತಾನದ ಐರೋಡಿ ಕುಮಾರಿ ಸೌಮ್ಯ ಶೆಟ್ಟಿ ವಿಶ್ವ ಚಾಂಪಿಯನ್‍ಶಿಪ್‍ಗೆ ಆಯ್ಕೆ

    ಸಾಸ್ತಾನದ ಐರೋಡಿ ಕುಮಾರಿ ಸೌಮ್ಯ ಶೆಟ್ಟಿ ವಿಶ್ವ ಚಾಂಪಿಯನ್‍ಶಿಪ್‍ಗೆ ಆಯ್ಕೆ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ: ಮಹಾರಾಷ್ಟ್ರದ ರೋಹಾದಲ್ಲಿ ಡಿ.26 ರಿಂದ 28ವರೆಗೆ ನಡೆದ 6ನೇ ರಾಷ್ಟೀಯ ಜೂನಿಯರ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‍ಶಿಪ್ ಮತ್ತು 12ನೇ ಮಿಕ್ಸ್ ಬಾಕ್ಸಿಂಗ್ ವಿಶ್ವ ಚಾಂಪಿಯನ್‍ಶಿಪ್ ಆಯ್ಕೆ ಪ್ರಕ್ರಿಯೆಯಲ್ಲಿ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಎಂ.ಕೆ ಹುಬ್ಬಳ್ಳಿಯ ಕ್ರೀಡಾಪಟು ಸಾಸ್ತಾನದ ಐರೋಡಿಯ ಕುಮಾರಿ ಸೌಮ್ಯ ಶೆಟ್ಟಿ 60 ಕೆಜಿ ತೂಕದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮೇ 2026 ಇಂಗ್ಲೆಂಡ್‍ನಲ್ಲಿ ನಡೆಯಲಿರುವ 12ನೇ ಜೂನಿಯರ್ ಮಿಕ್ಸ್ ಬಾಕ್ಸಿಂಗ್ ವಿಶ್ವ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ.

  • ಕೆಪಿಎಸ್ ಕೋಟೇಶ್ವರ – ವಾರ್ಷಿಕ ಕ್ರೀಡಾಕೂಟ ಸಂಪನ್ನ

    ಕೆಪಿಎಸ್ ಕೋಟೇಶ್ವರ – ವಾರ್ಷಿಕ ಕ್ರೀಡಾಕೂಟ ಸಂಪನ್ನ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ವಾರ್ಷಿಕ ಕ್ರೀಡಾಕೂಟ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆದು, ಪಥಸಂಚಲನದ ಗೌರವ ರಕ್ಷೆಯನ್ನು ಮುಖ್ಯ ಅತಿಥಿ ಮತ್ತು ಸಂಸ್ಥೆಯ ಹಳೇ ವಿದ್ಯಾರ್ಥಿ ಡಾ. ಮೊಹಮ್ಮದ್ ಆಸಿಫ್ ಬ್ಯಾರಿ ಸ್ವೀಕರಿಸಿ ಮಾತನಾಡಿ ಕ್ರೀಡೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಆರೋಗ್ಯಕರ ದೇಹ ಮತ್ತು ಮನಸ್ಸಿನ ಬೆಳವಣಿಗೆ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳ ಪೂರ್ಣ ಪ್ರಮಾಣದ ಸ್ವಾಸ್ಥ್ಯಕ್ಕೆ ಕ್ರೀಡೆ ಅವಶ್ಯಕ. ಪ್ರತಿಯೊಬ್ಬರು ದಿನವೊಂದಕ್ಕೆ ಒಂದು ಗಂಟೆಯಾದರೂ ಕ್ರೀಡಾ ಚಟುವಟಿಕೆಗೆ ಮೀಸಲಿಡಬೇಕು ಎಂದು ಅಭಿಪ್ರಾಯಪಟ್ಟರು.

    ಕೆಪಿಎಸ್ ನ ಪ್ರೌಢ ವಿಭಾಗದ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ರಾಜೇಶ್ ಉಡುಪರವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.

    ಸ್ಥಳೀಯ ಪಂಚಾಯತ್ ಅಧ್ಯಕ್ಷರು ಸಭಾ ಕಾರ್ಯಕ್ರಮದ ಅಧ್ಯಕ್ಷರು ರಾಗಿಣಿ ದೇವಾಡಿಗ ಕ್ರೀಡಾ ಧ್ವಜವನ್ನು ಅರಳಿಸಿದರು.

    ಇದೇ ಸಂದರ್ಭದಲ್ಲಿ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ಐವರು ವಿದ್ಯಾರ್ಥಿಗಳನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಇವರು ವೈಯಕ್ತಿಕ ನಗದು ಪುರಸ್ಕಾರ ನೀಡಿ ಗೌರವಿಸಿದರು.

    ಸಭೆಯಲ್ಲಿ ಸ್ಥಳೀಯ ವಾರ್ಡ್ ಸದಸ್ಯರಾದ ನಾಗರಾಜ್ ಎಂ., ಕಾಂಚನ್ ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಸದಸ್ಯರಾದ ಅಶೋಕ್, ಪ್ರೌಢ ವಿಭಾಗದ ಎಸ್ ಡಿ ಎಂ ಸಿ ಸದಸ್ಯರಾದ ಸಿದ್ದಿಕ್ ಮತ್ತು ಕುಮಾರಸ್ವಾಮಿ ಜೋಗಿ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಗಣೇಶ ಹೆಬ್ಬಾರ್ ನಿರೂಪಿಸಿ, ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಂದಿಸಿದರು. ಕ್ರೀಡಾಕೂಟವನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ ಸಂಘಟಿಸಿದ್ದರು.

  • ಖೇಲೋ ಜನತಾ ವಾರ್ಷಿಕ ಕ್ರೀಡೋತ್ಸವ ವಿಜೃಂಭಣೆಯಿಂದ ಸಂಪನ್ನ

    ಖೇಲೋ ಜನತಾ ವಾರ್ಷಿಕ ಕ್ರೀಡೋತ್ಸವ ವಿಜೃಂಭಣೆಯಿಂದ ಸಂಪನ್ನ

    ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಕ್ರೀಡಾಕೂಟವು ಜನತಾ ಪ. ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.

    ಪಿಎಂ ಶ್ರೀ ಸ್ಕೂಲ್ ಚಿತ್ತೂರಿನ ದೈಹಿಕ ಶಿಕ್ಷಕರಾಗಿರುವ ರಾಘವೇಂದ್ರ ಶೆಟ್ಟಿ ಅವರು ಧ್ವಜಾರೋಹಣವನ್ನು ಮಾಡಿ, ಕಲಿಕೆಯ ಜೊತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗಲು ಕ್ರೀಡಾಕೂಟದಿಂದ ಸಾಧ್ಯವಾಗಿದೆ ಎಂದು ಶುಭ ಹಾರೈಸಿದರು.

    ಮುಖ್ಯ ಅತಿಥಿಯಾಗಿರುವ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಅರೆಶಿರೂರು ಇದರ ದೈಹಿಕ ಶಿಕ್ಷಕರಾಗಿರುವ ರಾಜು ಶೆಟ್ಟಿಯವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ, ಸಹನಶೀಲತೆ ಮತ್ತು ಸದೃಢ ಮನಸ್ಸಿದ್ದಾಗ ಮಾತ್ರ ಇಡೀ ಜಗತ್ತನ್ನು ಗೆಲ್ಲುವ ಶಕ್ತಿ ವಿದ್ಯಾರ್ಥಿಗಳಲ್ಲಿ ಬೆಳೆಯಲು ಸಾಧ್ಯ. ಪಠ್ಯ ಮತ್ತು ಪಠ್ಯೇತರ ವಿಷಯಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಾಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
    ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾಗಿರುವ ಜಗದೀಶ್ ಶೆಟ್ಟಿ ಅವರು ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಕ್ರೀಡೆ ,ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಿಕೊಂಡಾಗ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಗೆಲುವನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

    ಜನತಾ ಪ.ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾಗಿರುವ ಉದಯ ನಾಯ್ಕ್ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಬೇಕು. ಮಕ್ಕಳಲ್ಲಿರುವ ಪ್ರತಿಭೆಗಳು ಅನಾವರಣಗೊಳ್ಳಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತದೆ ಎಂದು ಶುಭ ಹಾರೈಸಿದರು.

    ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ಅಂಧಕಾರವನ್ನು ಹೊಡೆದೋಡಿಸುವ ದೀಪವನ್ನು ಬೆಳಗುವುದರ ಮೂಲಕ, ಕ್ರೀಡೆಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯಲು ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಗ ಕ್ರೀಡೆಯಲ್ಲಿ ಯಶಸ್ವಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

    ಈ ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಶಿಕ್ಷಕ/ ಶಿಕ್ಷಕರೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಈ ಕಾರ್ಯಕ್ರಮವನ್ನು ಕನ್ನಡ ಸಹಶಿಕ್ಷಕಿಯಾಗಿರುವ ಅನಿತಾ ಅವರು ವಂದಿಸಿ, ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಸ್ವಾಗತಿಸಿ, ಸಂಯೋಜಕರಾಗಿರುವ ಸುಬ್ರಮಣ್ಯ ಮರಾಟಿಯವರು ನಿರೂಪಿಸಿದರು.

  • ಸುಜ್ಞಾನ ಪಿಯು ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ

    ಸುಜ್ಞಾನ ಪಿಯು ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ

    ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು: ಡಾ. ರಮೇಶ್ ಶೆಟ್ಟಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ವಿದ್ಯಾರಣ್ಯದ ನೂತನ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು.

    ಕ್ರೀಡಾಜ್ಯೋತಿ ಬೆಳಗಿದ ಅಧ್ಯಕ್ಷರು
    ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ಕ್ರೀಡಾಜ್ಯೋತಿ ಬೆಳಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಳಿಕ ಟೀಚರ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಕಿಶನ್ ರಾಜ್ ಶೆಟ್ಟಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

    ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮತ್ತು ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಅವರು ಕ್ರೀಡಾ ಧ್ವಜಾರೋಹಣ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಗೌರವಪೂರ್ವಕವಾಗಿ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಕ್ರೀಡೆ ಬದುಕಿನಲ್ಲಿ ಶಿಸ್ತು ಮೂಡಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾಸ್ಪೂರ್ತಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಹಾಗೂ ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿಸುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಗುಣವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಸೋಲೇ ಗೆಲುವಿನ ಮೆಟ್ಟಿಲು; ಭರತ್ ಶೆಟ್ಟಿ
    ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ” ಕ್ರೀಡೆಯಲ್ಲಿ ಸೋತಾಗ ಕುಗ್ಗದೇ ಅದನ್ನು ಮುಂದಿನ ಗೆಲುವಿಗೆ ಮೆಟ್ಟಿಲು ಎಂದು ತಿಳಿದುಕೊಳ್ಳಬೇಕು. ಕ್ರೀಡೆಯು ನಿಮ್ಮ ಬದುಕಿನಲ್ಲಿ ಶಿಸ್ತು ಮೂಡಿಸಲು ಸಹಕಾರಿಯಾಗಿದ್ದು, ವ್ಯಕ್ತಿತ್ವದ ವಿಕಸನಕ್ಕೆ ಬಹಳ ಮುಖ್ಯವಾಗಿದೆ. ಕ್ರೀಡೆಯನ್ನು ಕೇವಲ ಸ್ಪರ್ಧೆಯಾಗಿ ನೋಡದೆ, ಖುಷಿಯಿಂದ ಅನುಭವಿಸುವ ಗುಣವನ್ನು ಬೆಳೆಸಿಕೊಳ್ಳಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರು ವಿಜಯ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು.ಸುಜ್ಞಾನ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ, ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಹಾಗೂ ಕಾವ್ಯ ಶೆಟ್ಟಿ ಸಂಘಟಿಸಿದರು.ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

    ಸುಜ್ಞಾನ ಪಿಯು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಖುಷಿಯಿಂದ ಸ್ಪರ್ಧಿಸಿದರು.

  • ನೆಟ್ಬಾಲ್ ಪಂದ್ಯಾಟದಲ್ಲಿ ಪ್ರಚಂಡ ದಿಗ್ವಿಜಯದೊಂದಿಗೆ ರಾಜ್ಯಮಟ್ಟದ ಅಂಗಳಕ್ಕೇರಿದ ಜನತಾ ಶಾಲೆಯ 7 ವಿದ್ಯಾರ್ಥಿಗಳು

    ನೆಟ್ಬಾಲ್ ಪಂದ್ಯಾಟದಲ್ಲಿ ಪ್ರಚಂಡ ದಿಗ್ವಿಜಯದೊಂದಿಗೆ ರಾಜ್ಯಮಟ್ಟದ ಅಂಗಳಕ್ಕೇರಿದ ಜನತಾ ಶಾಲೆಯ 7 ವಿದ್ಯಾರ್ಥಿಗಳು

    ಕುಂದಾಪುರ ಮಿರರ್ ಸುದ್ದಿ…

    ಕಿರಿಮಂಜೇಶ್ವರ: ನವೆಂಬರ್17ರಂದು ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪ್ರಜ್ಞಾ (8ನೇ ತರಗತಿ), ಅಪೇಕ್ಷಾ(8ನೇ ತರಗತಿ),ವೈಭವಿ (7ನೇ ತರಗತಿ) ಚಾರ್ವಿ (7ನೇ ತರಗತಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    14ರ ವಯೋಮಾನದ ಹುಡುಗರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಅಭಿಲಾಶ್ (8ನೇ ತರಗತಿ), ಮತ್ತು ಶ್ರೇಯಸ್ (8ನೇ ತರಗತಿ) ರಾಜ್ಯಮಟ್ಟದಲ್ಲಿ ಆಡುವ ಅರ್ಹತೆಯನ್ನು ಗಳಿಸಿರುತ್ತಾರೆ.

    17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ (9ನೇ ತರಗತಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಭರ್ಜರಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು.

    ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಕಿರಿಮಂಜೇಶ್ವರದ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

  • ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಖೇಲೋ ಜನತಾ

    ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಖೇಲೋ ಜನತಾ

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ: ಕ್ರೀಡೆ ದೈಹಿಕ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳುವಲ್ಲಿ ಸಹಕಾರಿ ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕೀರ್ತಿ ಪಡೆಯಿರಿ. ಜನತಾ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಪ್ರತಿಭೆಗಳಿದ್ದಾರೆ, ಪ್ರತಿಭೆಗಳಿಗೆ ಸೂಕ್ತ ವೇದಿಕೆ ಜನತಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಹೆಗ್ಡೆ ಹೇಳಿದರು‌

    ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಖೋಲೋ ಜನತಾ ಕಾರ್ಯಕ್ರಮದ ಧ್ವಜಾರೋಹಣ ಗೈದು ಶುಭ ಹಾರೈಸಿದರು.

    ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆರಂಜಾಲು ಇಲ್ಲಿಯ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಕೆ. ವಿ ಮಾತನಾಡಿ ಕ್ರೀಡಾ ಉತ್ಸವ ನಮ್ಮ ಜೀವನಕ್ಕೆ ಜೀವನೋತ್ಸಾಹ ತಂದು ಕೊಡುತ್ತದೆ. ಎಲ್ಲ ರಂಗದಲ್ಲೂ ಸಿಕ್ಕಿರುವ ಅವಕಾಶ ಉಪಯೋಗಿಸಿಕೊಳ್ಳಿ ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲ್ಲಿ ಕ್ರೀಡೆಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

    ಕಾರ್ಯಕ್ರಮದಲ್ಲಿ ಜನತಾ ಪ್ರೌಢ ಶಾಲೆಯ ಶಿಕ್ಷಕರಾದ ವಿಠ್ಠಲ್ ನಾಯಕ್, ಕಾಲೇಜಿನ ಉಪ ಪ್ರಾoಶುಪಾಲ ರಮೇಶ್ ಪೂಜಾರಿ, ಉಪಸ್ಥಿತರಿದ್ದರು.

    ಉಪನ್ಯಾಸಕರಾದ ಅಲ್ತಾರು ನಾಗರಾಜ್ ಸ್ವಾಗತಿಸಿ, ಅಭಿಜಿತ್ ವಂದಿಸಿದರು. ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

  • ಹೆಮ್ಮಾಡಿ :ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

    ಹೆಮ್ಮಾಡಿ :ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕ್ರೀಡೆ ಸಮಾಜದಲ್ಲಿ ಸಾಮರಸ್ಯ ಮೂಡಿಸಿ ನಾವೆಲ್ಲಾ ಒಂದೆ ಎಂಬ ಭಾವನೆ ಮೂಡಿಸುತ್ತದೆ ಎಂದು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಹೇಳಿದರು.

    ಅವರು ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡಿ ನಮ್ಮಲ್ಲಿರುವ ನ್ಯೂನತೆ ಮರೆದು ಗುರಿ ಕಡೆಗೆ ಗಮನ ಕೊಟ್ಟಾಗ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದು ಎಂದರು.

    ವೇದಿಕೆಯಲ್ಲಿ ಜನತಾ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ,
    ಕಟ್ ಬೆಲ್ತೂರಿನ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್, ಕರಾಟೆ ಶಿಕ್ಷರಾದ ಅಕ್ಷಯ್,ಹಾಗೂ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತವಿಕ ಮಾತಾಗಳನ್ನಾಡಿದಾರು, ಉಪನ್ಯಾಸಕರಾದ ಉದಯ ನಾಯ್ಕ ನಿರೂಪಿಸಿದರು.

  • ತ್ರಿವಿಧ ಜಿಗಿತದಲ್ಲಿ ದಾಖಲೆ ನಿರ್ಮಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ

    ತ್ರಿವಿಧ ಜಿಗಿತದಲ್ಲಿ ದಾಖಲೆ ನಿರ್ಮಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀ ರಕ್ಷಾ 17 ರ ವಯೋಮಾನದ ಬಾಲಕಿಯರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜಯಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ.

    ಈ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿನ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

    ಜನತಾ ಪದವಿಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

  • ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ, 1 ಬೆಳ್ಳಿ ಪದಕ – ರಾಜ್ಯಮಟ್ಟಕ್ಕೆ ಆಯ್ಕೆ

    ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ: ವಡೇರಹೋಬಳಿ ಪ್ರೌಢಶಾಲೆಯ ವಿದ್ಯಾರ್ಥಿಗೆ 2 ಚಿನ್ನ, 1 ಬೆಳ್ಳಿ ಪದಕ – ರಾಜ್ಯಮಟ್ಟಕ್ಕೆ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಇಲ್ಲಿನ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆತಿಥ್ಯದಲ್ಲಿ ನಡೆದ ಜಿಲ್ಲಾ‌ ಮಟ್ಟದ ಕ್ರೀಡಾಕೂಟದಲ್ಲಿ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆ ವಡೇರಹೋಬಳಿ ಶಾಲೆಯ ವಿದ್ಯಾರ್ಥಿ ಓಟದಲ್ಲಿ 2 ಚಿನ್ನ‌ ಹಾಗೂ 1 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    9ನೇ ತರಗತಿಯ ವಿದ್ಯಾರ್ಥಿ ವಿಠಲ ಬಾಳಪ್ಪ ಮುನವಳ್ಳಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 3,000ಮೀ ಓಟದಲ್ಲಿ ಪ್ರಥಮ,1,500 ಮೀ ಓಟದಲ್ಲಿ ಪ್ರಥಮ ಹಾಗೂ 800 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಗಳಿಸಿ ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

    ವಿಜೇತ ವಿದ್ಯಾರ್ಥಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಿವಾಸಿ ಬಾಳಪ್ಪ ಮತ್ತು ಯಲ್ಲವ್ವಾ ದಂಪತಿಯ ಪುತ್ರ. ವಿದ್ಯಾರ್ಥಿಗೆ ವಡೇರಹೋಬಳಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾ ಮತ್ತು ತರಬೇತುದಾರರಾಗಿ ಸತೀಶ್ ಚಿಕ್ಕಮಗಳೂರು ಮಾರ್ಗದರ್ಶನ ನೀಡಿದ್ದರು.

    ಶಾಲಾ ಅಧ್ಯಾಪಕರು,ಎಸ್ ಡಿ ಎಂ ಸಿ, ಹಳೆ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು ಹಾಗೂ ಶ್ರೀ ಬಸವೇಶ್ವರ ಯುವಕ ಮಂಡಲ ಮತ್ತು ಬಸವೇಶ್ವರ ಭಜನಾ ಮಂಡಳಿ (ರಿ.) ಟಿ.ಟಿ. ರಸ್ತೆ, ಭರತ್ಕಲ್ ಕುಂದಾಪುರ, ಜೈ ಶಿವಾಜಿ ಕ್ರಿಕೆಟರ್ಸ್ ಮತ್ತು ಜೈ ಶಿವಾಜಿ ಗಣೇಶೋತ್ಸವ ಸಮಿತಿ(ರಿ.) ಟಿ.ಟಿ ರಸ್ತೆ ಕುಂದಾಪುರ,ಟಿ.ಟಿ.ಫ್ರೆಂಡ್ಸ್‌ ಟಿ.ಟಿ.ರಸ್ತೆ. ಕುಂದಾಪುರ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ವಿದ್ಯಾರ್ಥಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.