ಕೋಟ ಪಂಚವರ್ಣ ಸಂಸ್ಥೆಯ 154ನೇ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನ

0
385

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ,ಮಣೂರು ಫ್ರೆಂಡ್ಸ್ ಮಣೂರು, ಯಕ್ಷ ಸೌರಭಕಲಾರಂಗ ಕೋಟ ಸಂಯುಕ್ತ ಸಹಯೋಗದೊಂದಿಗೆ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ 154ನೇ ವಾರದ ಕಾರ್ಯಕ್ರಮದ ಪ್ರಯುಕ್ತ ಕೋಟ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸರ್ವಿಸ್ ರಸ್ತೆ ಸಮೀಪ ಬಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕದ್ರಿ ಮಂಜುನಾಥೇಶ್ವರ ದೇವಳ ಮಂಗಳೂರು ಇದರ ಟ್ರಸ್ಟಿ ಕುಸುಮಾ ದೇವಾಡಿಗ,ಕೋಟ ಗ್ರಾಮಪಂಚಾಯತ್ ಆಧ್ಯಕ್ಷ ಅಜಿತ್ ದೇವಾಡಿಗ,ಪಂಚವರ್ಣ ಹಾಗೂ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here