ಸಿದ್ಧಾಪುರ :ಡಬ್ಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ದಿ ಸ್ಥಿರ – ಅಮಿತ್ ಶಾ

0
362

ಸಿದ್ಧಾಪುರದಲ್ಲಿ ಅಮಿತ್ ಷಾ ರೋಡ್ ಶೋ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಬಿಜೆಪಿ ಸಮಾನತೆಯ ಆಧಾರದಲ್ಲಿ ಆಡಳಿತ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಡಬ್ಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಸ್ಥಿರವಾಗಿದೆ. ಇದು ಮುಂದುವರಿಯಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿ, ಬಳಿಕ ಮಾತನಾಡಿದರು.

ಬೈಂದೂರಿನಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದರೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಅವರು ಹೇಳಿದರು.

ರಾಷ್ಟ್ರದಲ್ಲಿ ಸುರಕ್ಷತೆಗೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಪಿಎಫ್‍ಐಯಂತಹ ಸಂಘಟನೆಗಳನ್ನು ನಿಷೇಧ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವುದು, ವಿದ್ವಾಂಸಕ ಚಟುವಟಿಕೆಗಳ ನಿರ್ಮೂಲನೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದಲ್ಲಿ ಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ ಇವತ್ತು ನಿರ್ಮಾಣವಾಗಿದೆ. ಬಾಂಬ್ ದಾಳಿಯಂತಹ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ ಎಂದರು.

ಕರಾವಳಿ ಭಾಗದಲ್ಲಿ ರೈತರ ಹಿತಾಸಕ್ತಿಯ ಕಾಪಾಡುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ಅಡಿಕೆ ಕೃಷಿಕರಿಗೆ ಬೆಂಬಲ ನೀಡಿದ್ದರಿಂದ ಉತ್ತಮ ಧಾರಣೆ ಲಭಿಸಿದೆ. ಎಲ್ಲ ಸ್ತರಗಳ ಜನರಿಗೆ ಸಾಮಾಜಿಕ ನ್ಯಾಯ ನೀಡುವಲ್ಲಿ ಸರ್ಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ ಕುಯಿಲಾಡಿ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here