ಕೋಟ – ರೈತರೆಡೆಗೆ ನಮ್ಮ ನಮ್ಮ ನಡಿಗೆ – ಚಂದ್ರ ಕಾರ್ಕಡ ಇವರಿಗೆ ಗೌರವ

0
322

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿ ವ್ಯಾಪ್ತಿಯಲ್ಲಿ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 25ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಮೇ.20 ಶನಿವಾರ ಸಂಜೆ 4.ಗ ನಡೆಯಲಿದೆ. ಈ ಬಾರಿ ಸಾಲಿಗ್ರಾಮದ ಕಾರ್ಕಡ ಪರಿಸರದ ಹಿರಿಯ ಕೃಷಿ ಕಾಯಕ ಜೀವಿ ಚಂದ್ರ ಕಾರ್ಕಡ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here