ಕುಂದಾಪುರ :ವಿ.ವಿ. ಮಟ್ಟದ ಚೆಸ್ ಪಂದ್ಯಾಟದಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

0
439

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮೇ 16ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ (Silver Medal) ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನವನ್ನು(Bronze Medal) ಪಡೆದುಕೊಂಡಿದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ತರಬೇತಿ ನೀಡಿದ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‍ನ ನರೇಶ್ ಬಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here