ಕುಂದಾಪುರ :ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ – ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0
302

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ 2023ರ ಅಂಗವಾಗಿ ಕುಂದಾಪುರ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಉಪ ನಿರೀಕ್ಷಕರಾದ ಪ್ರಸಾದ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಪರಿಣಾಮ, ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಸಹ ಶಿಕ್ಷಕ ಗಣೇಶ್ ಕಾಂಚನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here