ಜೂ.29ಕ್ಕೆ ನಿವೃತ್ತ ಯೋಧ ಪಾರಂಪಳ್ಳಿ ಗಣೇಶ್ ಅಡಿಗರಿಗೆ ಪಂಚವರ್ಣ ರಜತ ಗೌರವ ಸಮ್ಮಾನ

0
432

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ಬೆಳ್ಳಿ ಹಬ್ಬದ ವರ್ಷಾಚರಣೆಯ ಅಂಗವಾಗಿ ಸಾಧಕರಿಗೆ ರಜತ ಗೌರವಾರ್ಪಣೆ ನೀಡುತ್ತಿದ್ದು ಈ ಹಿನ್ನಲ್ಲೆಯಲ್ಲಿ ಈ ತಿಂಗಳು ಭಾರತೀಯ ಭೂ ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಾಲಿಗ್ರಾಮದ ಪಾರಂಪಳ್ಳಿ ಗಣೇಶ್ ಅಡಿಗ ಇವರನ್ನು ಆಯ್ಕೆಗೊಳಿಸಲಾಗಿದೆ.

ಪಂಚವರ್ಣ ಸಂಸ್ಥೆ ನೀಡುತ್ತಿರುವ ಆರನೇ ಸಾಧಕ ಶಕ್ತಿಯಾಗಿದ್ದು ಈ ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಸಹಕಾರಿ ಕ್ಷೇತ್ರದ ಸಾಧಕ ಜಿ.ತಿಮ್ಮ ಪೂಜಾರಿ, ಸಮಾಜಸೇವಕ ಈಶ್ವರ್ ಮಲ್ಪೆ, ಅನಾಥರ ಬದುಕಿನ ಆಶಾಕಿರಣ ಹೊಸಬೆಳಕು ವಿನಯಚಂದ್ರ ಸಾಸ್ತಾನ, ವಿಶೇಷಚೇತನ ಸಾಧಕಿ ಲಲಿತಾ ಪೂಜಾರಿ, ಸಾಲಿಗ್ರಾಮದ ಹಿರಿಯ ವೈದ್ಯರಾದ ಡಾ.ವಿಶ್ವೇಶ್ವರ ತುಂಗ, ಸಹಕಾರಿ ಕ್ಷೇತ್ರದ ಕೊರಗ ಪೂಜಾರಿ ಇವರುಗಳನ್ನು ಗುರುತಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ. ಇದೇ ಜೂ.29ರಂದು ಪಾರಂಪಳ್ಳಿಯ ಅವರ ಸ್ವಗೃಹದಲ್ಲಿ ಈ ಗೌರವ ಕಾರ್ಯಕ್ರಮ ನಡೆಯಲಿದೆ ಎಂದು ಪಂಚವರ್ಣ ಸಂಸ್ಥೆಯ ಅಧ್ಯಕ್ಷ ಅಜಿತ್ ಆಚಾರ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here