ಪಂಚವರ್ಣದ ಸಂಸ್ಥೆಯ ರೈತರೆಡೆಗೆ ನಮ್ಮ ನಡಿಗೆ 27ನೇ ಸಾಧಕ ಶಕ್ತಿಯಾಗಿ ಪಾಂಡೇಶ್ವರ ಮೊಹನ್ ಪೂಜಾರಿ ಆಯ್ಕೆ

0
444

ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಹೋಬಳಿ ವ್ಯಾಪ್ತಿಯಲ್ಲಿ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 27ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಜು.9ರ ಬೆಳಿಗ್ಗೆ 10.ಗ ನಡೆಯಲಿದೆ.

ಈ ಬಾರಿ ಸಾಸ್ತಾನದ ಸಾಂಪ್ರಾದಾಯಿಕ ಕೃಷಿ ಕಾಯಕ ಜೀವಿ ಪಾಂಡೇಶ್ವರ ಮೂಡಹಡು ಮೋಹನ್ ಪೂಜಾರಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here