ಕುಂದಾಪುರ :ಭಂಡಾರ್ಕಾರ್ಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ನೇಮಕ

0
683

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜು ಆಡಳಿತ ಮಂಡಳಿಯು ಡಾ.ಶುಭಕರ ಆಚಾರಿ ಅವರನ್ನು 1ಆಗಸ್ಟ್ 2023ರಿಂದ ಪ್ರಾಂಶುಪಾಲರಾಗಿ ನೇಮಕ ಮಾಡಿದೆ.

ಕಾಲೇಜಿನ ಜನಪ್ರಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದ ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ ಶುಭಕರಾಚಾರಿ ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಡಾಕ್ಟರೇಟ್ ನ್ನು ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದರು.

ಸುಮಾರು 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳಾದ 2014ರ ಮಾದರಿ ಸಂಸತ್ತು, 2015ರ ಬುಡಕಟ್ಟು ಸಂಸ್ಕೃತಿ ಅನಾವರಣ
2016ರ ವಿಕಲ ಚೇತನ ಸಮಾವೇಶ
2017ರ ರಾಷ್ಟ್ರಮಟ್ಟದ ಬುಡಕಟ್ಟು ಸಮ್ಮೇಳನ
2019ರಲ್ಲಿ ನಮ್ಮ ಕುಂದಾಪ್ರ ಸ್ವಚ್ಛ ಕುಂದಾಪ್ರ ಕಾರ್ಯಕ್ರಮಗಳ ಸಂಯೋಜಕರಾಗಿ ಕಾರ್ಯಕ್ರಮಗಳನ್ನು ಸಮರ್ಥವಾಗಿ ನಿಭಾಯಿಸಿದರು.

ಪ್ರಸ್ತುತ 1ಆಗಸ್ಟ್ ಈ ಹಿಂದಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಿದ್ದಾರೆ. 1ಆಗಸ್ಟ್ 2023ರಿಂದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಶುಭಕರಾಚಾರಿ ನೇಮಕಗೊಂಡು ಕಾಲೇಜನ್ನು ಮುನ್ನಡೆಸಲಿರುವರು.

LEAVE A REPLY

Please enter your comment!
Please enter your name here