ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0
767

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್, 40 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್.58 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here