ಕುಂದಾಪುರ :ವಾಲಿಬಾಲ್ ಪಂದ್ಯಾಟ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
960

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬ್ಯಾರಿಸ್ ಪದವಿ ಪೂರ್ವ ಕಾಲೇಜು ಕೋಡಿ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಕಲ್ಪಿತಾ ಮತ್ತು ಓಂಕಾರ್ ಕಾಲೇಜು ತಂಡವನ್ನು ಪ್ರತಿನಿಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here