ಫುಟ್ಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
1015

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ, ಕುಂದಾಪುರ ಇವರ ಸಹಯೋಗದಲ್ಲಿ ಶುಕ್ರವಾರ ಸೆ. 22 ರಂದು ನಡೆದ ಫುಟ್ಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ವಿದ್ಯಾರ್ಥಿಗಳನ್ನು ತರಬೇತಿ ಗೊಳಿಸಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here