ಫುಟ್ಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

0
1029

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜು ಶಿರೂರು ಇವರ ಸಹಯೋಗದಲ್ಲಿ ಸೆ.23ರಂದು ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣದ ಉಪನ್ಯಾಸಕರಾದ ರಾಘವೇಂದ್ರ ಗಾಣಿಗರವರ ಅತ್ಯುತ್ತಮ ತರಬೇತಿಯಿಂದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here