ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0
727

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಟೆನ್ನಿ ಕೋಯಿಟ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯ ರ ತಂಡ ಪ್ರಥಮ ಸ್ಥಾನವನ್ನು ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣದ ಉಪನ್ಯಾಸಕರಾದ ರಾಘವೇಂದ್ರ ಗಾಣಿಗರವರು ವಿದ್ಯಾರ್ಥಿನಿಯರನ್ನು ಅತ್ಯುತ್ತಮ ರೀತಿಯಲ್ಲಿ ತರಬೇತಿಗೊಳಿಸಿರುತ್ತಾರೆ. ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here