ಕುಂದಾಪುರ :ಕೆಪಿಎಸ್ ಕೋಟೇಶ್ವರ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0
522

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೆಪಿಎಸ್ ಪ್ರೌಢಶಾಲೆ ಸರಕಾರಿ ಪದವಿಪೂರ್ವ ಕಾಲೇಜು ಕೋಟೇಶ್ವರ ಇಲ್ಲಿನ ನಾಲ್ಕು ವಿದ್ಯಾರ್ಥಿಗಳು ಐದು ವಿಭಾಗಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ನಡೆಸಿದ ಕ್ರೀಡಾಕೂಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಾಕೆತ್ ಡಿಸ್ಕಸ್ ಥ್ರೋ ನಲ್ಲಿ ಪ್ರಥಮ, ರಂಜನ್ ಪೈ 80ಮೀ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಂಜನ್ ಪೈ 80 ಮೀಟರ್ ಹರ್ಡಲ್ಸ್ ನಲ್ಲಿ ಜಿಲ್ಲಾ ದಾಖಲೆ ಮುರಿದು ಮುನಿಯಾಲು ದಿ ರಾಮಕೃಷ್ಣ ಹೆಗಡೆ ಇವರ ಸ್ಮರಣಾರ್ಥದ ನಗದು ಪುರಸ್ಕಾರಕ್ಕೆ ಪಾತ್ರನಾಗಿರುತ್ತಾನೆ. 14ರ ವಯೋಮಾನದ 200 ಮೀಟರ್ ಓಟದಲ್ಲಿ ಪ್ರಥಮ್ ದ್ವಿತೀಯ ಸ್ಥಾನ ಪಡೆಯುವ ಮೂಲಕ ಎರಡು ಚಿನ್ನ ಒಂದು ಬೆಳ್ಳಿ ಪದಕದೊಂದಿಗೆ ಉತ್ತಮ ಸಾಧನೆ ಮಾಡಿದ್ದು ವಿದ್ಯಾರ್ಥಿಗಳ ಕ್ರೀಡಾ ಭವಿಷ್ಯಕ್ಕೆ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅಭಿನಂದಿಸಿದ್ದು ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ. ಮಾರ್ಗದರ್ಶನ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here