ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ದಿವೀಶ್ ರಾಜ್ಯ ಮಟ್ಟಕ್ಕೆ ಆಯ್ಕೆ

0
572

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿಯವರು ಡಿ.16 ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಕುಂದಾಪುರದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಿವೀಶ್ ಶೆಣೈ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here