ಕುಂದಾಪುರ :ಡಿಸೆಂಬರ್ 24ರಂದು ಬಿ. ಅಪ್ಪಣ್ಣ ಹೆಗ್ಡೆಯವರ 89ನೇ ಹುಟ್ಟುಹಬ್ಬ – ಆಸ್ಮಾ ಬಾನುಗೆ ಸನ್ಮಾನ

0
500

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಡಿಸೆಂಬರ್ 24ರಂದು ಧಾರ್ಮಿಕ ಮುಂದಾಳು, ಮಾಜೀ ಶಾಸಕ ಬಿ. ಅಪ್ಪಣ್ಣ ಹೆಗ್ಡೆಯವರ 89ನೇ ಹುಟ್ಟುಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಭತ್ತದ ತಳಿ ಸಂಗ್ರಾಹಕಿಯಾಗಿ ಸಾಮಾಜಿಕ ಮತ್ತು ಕೃಷಿ ಆಧಾರಿತ ಸೇವೆ ಸಲ್ಲಿಸುತ್ತಿರುವ ಮೂಡಬಿದಿರೆಯ ಆಸ್ಮಾ ಬಾನು ಅವರಿಗೆ ರನ್ನು ಸನ್ಮಾನಿಸಲಾಗುವುದು ಎಂದು ಈ ಬಾರಿಯ ಬಿ. ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಟ್ರಸ್ಟ್ ನ ಅಧ್ಯಕ್ಷ ಬಿ. ರಾಮ ಕಿಶನ್ ಹೆಗ್ಡೆ ತಿಳಿಸಿದ್ದಾರೆ.

ಕಾಯಕವೇ ಕೈಲಾಸ ಎಂದು ದುಡಿಯುತ್ತಿರುವ ಆಸ್ಮ ಬಾನು ದೇಶದ ಬೇರೆ ಬೇರೆ ರಾಜ್ಯಗಳಿಂದ ಅಳಿವಿನಂಚಿನಲ್ಲಿರುವ ಭತ್ತದ ಬೀಜಗಳನ್ನು ಸಂಗ್ರಹಿಸುವ ವಿಶೇಷ ಕೆಲಸವನ್ನು ಮಾಡುತ್ತಿದ್ದಾರೆ. ಈ ವರ್ಷ 840ಕ್ಕೂ ಹೆಚ್ಚಿನ ಭತ್ತದ ತಳಿಗಳನ್ನು ಸಂಗ್ರಹಿಸಿ ಬೆಳೆಸಿದ್ದಾರೆ. ಈ ಬೀಜಗಳ ಬಗ್ಗೆ ವಿಶೇಷವಾಗಿ ಅಧ್ಯಯನ ಮಾಡಿ ಅವುಗಳಲ್ಲಿರುವ ಆರೋಗ್ಯಕಾರಿ ವಿಷಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇವರ ಈ ಅಪರೂಪದ ಸಾಧನೆಗಳನ್ನು ಗಮನಿಸಿ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಶ್ರೀ ಶಾರದಾ ಕಾಲೇಜು ಬಸ್ರೂರಿನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅನಾರೋಗ್ಯ ಪೀಡಿತರು ಹಾಗೂ ಅಶಕ್ತರಿಗೆ ದತ್ತಿ ನಿಧಿ ವಿತರಿಸಲಾಗುವುದು. ಉಡುಪಿ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವದಿಸಲಿದ್ದಾರೆ. ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here