ಕುಂದಾಪುರ :ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್‌ಗೆ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ

0
398

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.

LEAVE A REPLY

Please enter your comment!
Please enter your name here