ಕುಂದಾಪುರ :ಮತದಾನದ ಮೂಲಕ ಸಾಂವಿಧಾನಿಕ ಹಕ್ಕು ಪಡೆದುಕೊಳ್ಳಿ – ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮತ ಚಲಾಯಿಸುವುದೆಂದರೆ ಸರ್ಕಾರವನ್ನು ಪ್ರಶ್ನಿಸುವ ಮತ್ತು ನಮ್ಮ ಸಮಸ್ಯೆಗಳನ್ನು ಸರ್ಕಾರದ ಮುಂದಿಡಲು ನಮಗಿರುವ ನೈತಿಕ ಅವಕಾಶ ಎನ್ನುವುದನ್ನು ಪ್ರತಿಯೊಬ್ಬ ಮತದಾರ ಅರ್ಥಮಾಡಿಕೊಳ್ಳಬೇಕು ಎಂದು ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಆಡಳಿತ ನಿರ್ದೇಶಕ, ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು

ಅವರು ತಮ್ಮ ತವರೂರಾದ ವಕ್ವಾಡಿಯ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದರು. ಪ್ರತಿಯೊಬ್ಬರೂ ಮತದಾನಕ್ಕೆ ಮುಂಚೆ ಯೋಚಿಸಿ ಮತ ಚಲಾಯಿಸಿ. ಸುಭದ್ರ ಆಡಳಿತಕ್ಕೆ ಪ್ರತಿಯೊಬ್ಬರ ಮತವೂ ಅಗತ್ಯ. ಯಾರೂ ನಿರ್ಲಕ್ಷ್ಯ ಮಾಡದೇ ಮತದಾನ ಮಾಡಿ ಎಂದರು.

Comments

Leave a Reply

Your email address will not be published. Required fields are marked *

More posts

Exit mobile version