ಕುಂದಾಪುರ :ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯ ಮಾಪನ – ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಅವಿಭಜಿತ ತಾಲೂಕಿನಲ್ಲಿ ಪ್ರಥಮ. 11 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ರ್ಯಾಂಕ್

0
6187

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಅವಿಭಜಿತ ತಾಲೂಕಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, 11 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನ ಪಡೆಯುವುದರ ಮೂಲಕ ಸಾಧನೆ ಮೆರೆದಿದೆ.

ವಾಣಿಜ್ಯ ವಿಭಾಗದಲ್ಲಿ ವಿನಯ್ ಶ್ಯಾನುಭಾಗ್ 593 ಅಂಕದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.

ವಿಜ್ಞಾನ ವಿಭಾಗದಲ್ಲಿ ಶ್ರೀ ಲಕ್ಷ್ಮಿ ಹೆಬ್ಬಾರ್ 593 ಅಂಕದೊಂದಿಗೆ ರಾಜ್ಯಕ್ಕೆ 6 ನೇ ಸ್ಥಾನ ಪಡೆದು ತಾಲೂಕಿಗೆ ಪ್ರಥಮ ಸ್ಥಾನ.

ಈ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಅಭೂತಪೂರ್ವ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ ರ್ಯಾಂಕ್, ಸುಜಯಾ ಎಚ್‌ ಮತ್ತು ಅನಿರುದ್ದ್‌ ಶೇಟ್‌ 591 ಅಂಕಗಳೊಂದಿಗೆ 8ನೇ ರ್ಯಾಂಕ್, ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ್ಯಾಂಕ್, ನಮ್ರತಾ 589 ಅಂಕಗಳೊಂದಿಗೆ 10 ನೇ ರ್ಯಾಂಕ್ ಪಡೆದಿರುತ್ತಾರೆ .

ವಾಣಿಜ್ಯ ವಿಭಾಗದಲ್ಲಿ ಆಯೇಷಾ ಮುಸ್ಕಾನ್ ಮತ್ತು ಸಿಂಚನಾ 590 ಅಂಕಗಳೊಂದಿಗೆ 8ನೇ ರ್ಯಾಂಕ್, ಶ್ರದ್ದಾ 588 ಅಂಕಗಳೊಂದಿಗೆ 10 ನೇರ್ಯಾಂಕ್ ಪಡೆದು ರಾಜ್ಯದ ಅಗ್ರ ಸ್ಥಾನಿಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here