ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 37ನೇ ಕೃಷಿ ಹಾಗೂ ಕಂಬಳ ಕ್ಷೇತ್ರದ ಸಾಧಕ ಗಿಳಿಯಾರು ಬೋಜ ಪೂಜಾರಿ ಆಯ್ಕೆ

0
693

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 37ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಜು.21ರ ಭಾನುವಾರ ಪೂರ್ವಾಹ್ನ 10.30ಗ ನಡೆಯಲಿದ್ದು ಕೃಷಿ ಮತ್ತು ಕಂಬಳ ಕ್ಷೇತ್ರದ ಸಾಧನೆಗೈದ ಬ್ರಹ್ಮಾವರ ತಾಲೂಕಿನ ಗಿಳಿಯಾರು ಬೋಜ ಪೂಜಾರಿ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

LEAVE A REPLY

Please enter your comment!
Please enter your name here