ಕುಂದಾಪುರ :CSEET ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಕಾಲೇಜಿನ ವಿದ್ಯಾರ್ಥಿಗಳು

0
259

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :CSEET-ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು CS ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ.

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here