ಕುಂದಾಪುರ :ಭಾರೀ ಗಾಳಿ ಮಳೆ – ಕುಂದಾಪುರ ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ

0
2233

ಕುಂದಾಪುರ ಮಿರರ್ ಸುದ್ದಿ…
ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.25) ರಜೆ ಘೋಷಣೆ ಮಾಡಿದ್ದಾರೆ.

ಉಡುಪಿಯ ಕೆಲ ತಾಲೂಕಿನಲ್ಲಿ ಕಳೆದ ಕೆಲವು ಗಂಟೆ ಗಳಿಂದ ಭಾರೀ ಗಾಳಿ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಹಸಿಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here