ಉಡುಪಿ :ನಿರಂತರ ಮಳೆ – ಆ.2ರಂದು ಶಾಲಾ-ಕಾಲೇಜುಗಳಿಗೆ ರಜೆ

0
401

ಕುಂದಾಪುರ ಮಿರರ್ ಸುದ್ದಿ…
ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆ, ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.2ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಹಾಗೂ ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

LEAVE A REPLY

Please enter your comment!
Please enter your name here