ಕೋಟ: ಸಾವಿನಲ್ಲೂ ಒಂದಾದ ಹಿರಿ ದಂಪತಿಗಳು

0
2062

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಪ್ತಪದಿಯ ನಂತರ ಸಂಸಾರದಲ್ಲಿ ಒಂದಾಗಿ ಬದುಕು ಕಟ್ಟಿಕೊಂಡ ದಂಪತಿಗಳು ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದ ಹಿರಿ ಜೋಡಿಗಳು.

ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆ, ಕೃಷಿರಾಗಿ ಗುರುತಿಸಿಕೊಂಡಿದ್ದರು.ಅವರ ಪತ್ನಿ ಮುತ್ತು ಪೂಜಾರ್ತಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ ಯಾಗಿದ್ದವರು. ಕೃಷ್ಣ ಪೂಜಾರಿ ಅವರ ಪತ್ನಿ ಮುತ್ತು ಪೂಜಾರ್ತಿಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮುತ್ತು ಪೂಜಾರ್ತಿಯವರ ಅಂತ್ಯಕ್ರಿಯೆ ಮುಗಿಸಿ ವಾಪಾಸ್ಸು ಬರುತ್ತಿದ್ದ ವೇಳೆ ಪತ್ನಿ ಕಳೆದುಕೊಂಡಿದ್ದ ಶಾಕ್ ನಲ್ಲಿದ್ದ ಅವರ ಪತಿ ಕೃಷ್ಣ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ದಂಪತಿಗಳು ಮೂವರು ಪುತ್ರಿ, ಒರ್ವ ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here