ಪಂಚವರ್ಣದ 38ನೇ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆ ಕೋಟದ ಕಾಸನಗುಂದು ಸುಧಾಕರ್ ಶೆಟ್ಟಿ ಆಯ್ಕೆ

0
224

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 38ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಆ.30ರ ಶುಕ್ರವಾರ ಸಂಜೆ 4.30ಗ ನಡೆಯಲಿದ್ದು ಸಾಂಪ್ರಾದಯ ಕೃಷಿ ,ಹೈನುಗಾರಿಕಾ ಕ್ಷೇತ್ರದ ಸಾಧಕ ಬ್ರಹ್ಮಾವರ ತಾಲೂಕಿನ ಕೋಟದ ಕಾಸನಗುಂದು ಸುಧಾಕರ್ ಶೆಟ್ಟಿ ಇವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಅಚಾರ್, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here