ಕುಂದಾಪುರ :ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 2 ಚಿನ್ನ, 7 ಬೆಳ್ಳಿ ಪದಕ

0
716

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಗಸ್ಟ್ 28ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಂ. ಜಿ. ಎಂ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ ಮಣಿಪಾಲ್ ಮರೀನಾ ಈಜು ಕೊಳದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರೋಹಿತ್ 1 ಚಿನ್ನ ಮತ್ತು 1 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವಿನ್ 1 ಚಿನ್ನ, 1ಬೆಳ್ಳಿ ಪದಕ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ 2 ಬೆಳ್ಳಿ ಪದಕ,ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನಿಶಾಂತ್ ಖಾರ್ವಿ 1 ಬೆಳ್ಳಿ , ನಿಶ್ಚಿತ್ ಖಾರ್ವಿ 1ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಯೋಗ್ 1 ಬೆಳ್ಳಿ ಪದಕ ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here