ಕರಾಟೆ ಪಂದ್ಯಾಟ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ. 1 ಚಿನ್ನ, 3 ಬೆಳ್ಳಿ.

0
224

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ತರುಣ್ (50kg) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg) ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ಕೃಷ್ಣ ಉಪಸ್ಥಿತರಿದ್ದಾರೆ.

ವಿದ್ಯಾರ್ಥಿಗಳ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here