ಫುಟ್ಬಾಲ್ ಪಂದ್ಯಾಟ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
531

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ ಕುನಾಲ್, ಕೆ.ಶ್ರೀನಿತಾ ಎಸ್ ಕಾಮತ್, ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ಸಂಜನಾ, ವನಿಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here