ಕುಂದಾಪುರ: ಕೊಲ್ಲೂರಿಗೆ ಹೋಗುತ್ತಿದ್ದ ಬಸ್ ಹಾಗೂ ಪಿಕ್ ಅಪ್ ಡಿಕ್ಕಿ -ಬಸ್ ಪಲ್ಟಿ, ಐವರಿಗೆ ಗಾಯ

0
811

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗೀ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಮೆಣಸು ಸಾಗಾಟದ ಪಿಕ್ ಆಫ್ ಡಿಕ್ಕಿಯಾದ ಪರಿಣಾಮ ಬಸ್ಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ನಡೆದಿದೆ.

ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೊಲ್ಲೂರಿನಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕ್ ಆಫ್ ವಾಹನವೊಂದು ಕುಂದಾಪುರ ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗೀ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯ ಗೊಂಡವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ.

ರಾಘವೇಂದ್ರ ಹಾಗು ವಾಸಿಂ ಪಿಕ್ ಆಫ್ ನಲ್ಲಿ ಇದ್ದವರು. ಉಳಿದವರು ಬಸ್ಸಿನಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here