ಗಂಗೊಳ್ಳಿ :ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಾರ್ಥನಾ ಪೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0
366

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಜಿಲ್ಲಾಡಳಿತ, ರಾಮನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ರಾಮನಗರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕನಕಪುರ ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರದ ಟೌನ್ ಟೆನ್ನಿಸ್ ಕ್ಲಬ್‍ನಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮೈಸೂರಿನಲ್ಲಿ ಅ.7ರಂದು ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು.

ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಇವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here