ಕುಂದಾಪುರ :ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

0
1161

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ. ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಪ್ರದೀಪ್ ಕೆ ಹಾಗೂ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here