ಕೋಟ :ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನವೆಂಬರ್ ೧೦ ರಂದು ಕೋಟಕ್ಕೆ ಮೇಘಾಲಯ ರಾಜ್ಯಪಾಲರಾದ ಸಿ.ಎಚ್. ವಿಜಯ ಶಂಕರ್

0
510

ಕುಂದಾಪುರ ಮಿರರ್ ಸುದ್ದಿ…

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರಾದ ಸಿ ಎಚ್ ವಿಜಯ್ ಶಂಕರ್ ಅವರು ನವೆಂಬರ್ ೧೦ ರಂದು ಬೆಳಿಗ್ಗೆ ೧೦.೩೦ ಕ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, , ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ, ಕಾರ್ಕಳ ವಿಧಾನಸಭಾ ಕ್ಷೇತ್ರ ಶಾಸಕ ವಿ ಸುನೀಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಯಶ್‌ಪಾಲ್ ಎ ಸುವರ್ಣ, , ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್ ಎಲ್ ಭೋಜೇಗೌಡ, ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕ ಯು ಎಸ್ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here