ಕುಂದಾಪುರ :ನ.22ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಮ್ಯಾನೇಜ್ಮೆಂಟ್ ಸ್ಪರ್ಧೆ – ಆರುಣ್ಯಾ 2024

0
690

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ನ.22 ರಂದು ಉಡುಪಿ ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಮ್ಯಾನೇಜ್ಮೆಂಟ್ ಸ್ಪರ್ಧೆ -ಆರುಣ್ಯಾ 2024 ಎನ್ನುವ ವಾಣಿಜ್ಯ, ನಿರ್ವಹಣಾ , ಸಾಂಸ್ಕೃತಿಕ ಮತ್ತು ಮಾಹಿತಿ ತಂತ್ರಜ್ಞಾನ ವಿಷಯಗಳ ಮೇಲೆ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗಿದೆ.

ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here