ಸಾಂಸ್ಕೃತಿಕ ಸ್ಪರ್ಧೆ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

0
753

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನ.21ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ವಿಭಾ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚೈತ್ರಾ ದ್ವಿತೀಯ ಸ್ಥಾನ, ಏಕಪಾತ್ರ ಅಭಿನಯದಲ್ಲಿ ಯುಕ್ತಾ ಹೊಳ್ಳ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here