ಕುಂದಾಪುರ :ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

0
568

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05.01.2025 ರಿಂದ 06.01.2025 ರ ವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ
ದೃಶ್ಯ, ಸಾಕೇತ್, ಅಕ್ಷಯ್ ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆ ಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here