ಫೆ.9ಕ್ಕೆ ಕೋಟದ ಪಂಚವರ್ಣ ಸಂಘಟನೆಯ 43ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ, ಸಾಧಕ ಕೃಷಿಕ ಹರ್ತಟ್ಟು ಬಾಬು ಶೆಟ್ಟಿ ಆಯ್ಕೆ

0
348

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕ ನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 43ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಫೆ.9ರ ಭಾನುವಾರ ಪೂರ್ವಾಹ್ನ 10.30ಕ್ಕೆ ನಡೆಯಲಿದ್ದು ಕೃಷಿ ಕ್ಷೇತ್ರದ ಸಾಧಕ ಬ್ರಹ್ಮಾವರ ತಾಲೂಕಿನ ಕೋಟದ ಹರ್ತಟ್ಟು ಹಿರಿಯ ಅನುಭವಿ ಕೃಷಿಕ ಬಾಬು ಶೆಟ್ಟಿ ಇವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here