ಫುಟ್ಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

0
852

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : STAIRS ನ್ಯಾಶನಲ್ ಗೇಮ್ಸ್ – 2025 ಅವರು ಮೇ. 19 ರಿಂದ 22ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣ ನವದೆಹಲಿಯಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ.

ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here