ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ಮಾಹಿತಿ ಕಾರ್ಯಾಗಾರ

0
541

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ, ಮಾಹಿತಿ ಕಾರ್ಯಾಗಾರ ನಡೆಯಿತು.

ಕಂಡ್ಲೂರು ಪೋಲಿಸ್ ಠಾಣೆಯ ಠಾಣಾಧಿಕಾರಿ ಭೀಮಾಶಂಕರ್ ರವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ ಮಾಹಿತಿ ನೀಡಿ ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು,
ಅವೆಲ್ಲವನ್ನೂ ಸ್ವೀಕರಿಸಬೇಡಿ, ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಅಭಿಜಿತ್ ವಂದಿಸಿದರು.

LEAVE A REPLY

Please enter your comment!
Please enter your name here