ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ (ರಿ.) ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಚಿತ್ರಕಲೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
465

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಜಯ ಕರ್ನಾಟಕ ದಿನಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೊಂದಿಗೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕ ದಿನಪತ್ರಿಕೆ ಆಯೋಜಿಸಿದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮನ್ವಿತ್ ಬಿ 10ನೇ ತರಗತಿ, ಅಭಿಕ್ಷಾ 10ನೇ ತರಗತಿ, ಶರಧಿ ಎಸ್ 9ನೇ ತರಗತಿ ಹಾಗೂ ಚಿತ್ರಾ ಜಿ ಪೂಜಾರಿ 7ನೇ ತರಗತಿ ಅತ್ಯುತ್ತಮ ನಿರ್ವಹಣೆಯಿಂದ,ಜುಲೈ 6 ರಂದು ಭಾನುವಾರ ಉಡುಪಿ ಅಂಬಲಪಾಡಿ ಫ್ಯಾಮಿಲಿ ಸಭಾಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ನಿರಂತರವಾಗಿ ನಡೆಯುವ ತರಬೇತಿ ಕಾರ್ಯಕ್ರಮಗಳು ಮತ್ತು ಪ್ರತಿ ಎರಡು ವಾರಗಳಿಗೊಮ್ಮೆ ನಡೆಯುವ ಪಠ್ಯೇತರ ಚಟುವಟಿಕೆಗಳು ಮಕ್ಕಳ ಈ ಅಮೋಘ ಸಾಧನೆಗೆ ಸಹಕಾರಿಯಾಗಿದೆ. ಮಕ್ಕಳ ಈ ಗಮನೀಯ ಸಾಧನೆಯನ್ನು ಶ್ಲಾಘಿಸಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ., ಶಿಕ್ಷಕ – ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here