ಬೈಂದೂರು :ಶಾಸಕ ಗುರುರಾಜ್‌ ಗಂಟಿಹೊಳೆ ಅಮೇರಿಕಾದ ಶೃಂಗಸಭೆಗೆ ಆಯ್ಕೆ

0
640

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿರುವ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿಧಾನಸಭಾ ಸಮಿತಿಯ ಮೂಲಕ ಅಮೇರಿಕಾದ ಬೋಸ್ಟನ್‌ಗೆ ಅಧ್ಯಯನ ಪ್ರವಾಸದ ಅವಕಾಶ ಪಡೆದಿದ್ದಾರೆ.

ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ಶಾಸಕಾಂಗ ಶೃಂಗಸಭೆ 2025 ನಡೆಯಲಿದ್ದು, ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

LEAVE A REPLY

Please enter your comment!
Please enter your name here