ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ವಿಭಾಗದ ಕ್ರೀಡಾ ಚಟುವಟಿಕೆಗಳ l ಜಿಲ್ಲಾ ಮಟ್ಟದ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

0
451

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ) ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಸಭೆ 2025-26ನೇ ಶೈಕ್ಷಣಿಕ ವರ್ಷದ ಕಾಲೇಜು ವಿಭಾಗದ ಕ್ರೀಡಾ ಚಟವಟಿಕೆಗಳ ಕುರಿತಾಗಿ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಜನತಾ ಪದತ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿಯವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಪ್ರಮುಖವಾದ್ದು ಈ ಶೈಕ್ಷಣಿಕ ವರ್ಷದ ಎಲ್ಲಾ ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಆಯೋಜಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆ ಗುರುತಿಸುವ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ಶು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರವರು ಮಾತನಾಡಿ ವಿದ್ಯಾರ್ಥಿ ಗಳ ಕಲಿಕೆ ನಾಲ್ಕು ಗೋಡೆಯೊಳಗಷ್ಟೆ ಸೀಮಿತವಾಗದೆ ಅದರಿಂದ ಆಚೆಗೆ ಬಂದಾಗ ಆ ಮೂಲಕ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

ಕಾರ್ಯಕ್ರಮದದಲ್ಲಿ ಕಳೆದ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ 35 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಯಾನಂದ ಪೈ, ಶಾಲಾ ಶಿಕ್ಷಣ (ಪದವಿಪೂರ್ವ)ವಿಭಾಗದ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ, ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿ ವಿಜಯ ರಾವ್‌, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್ ಹೆಗ್ಡೆ ಶಾನಾಡಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸುಕೇಶ ಶೆಟ್ಟಿ ಹೊಸಮಠ, ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ರವೀಂದ್ರ ಉಪಾಧ್ಯಾಯ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ದಿನೇಶ ಕೊಡವೂರು, ಸರ್ಕಾರಿ ಪದವಿಪೂರ್ವ ಕಾಲೇಜು ಸಾಣೂರು ಇಲ್ಲಿಯ ಪ್ರಾಂಶುಪಾಲರಾದ  ಸುಚೇತ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ
ಗಣೇಶ ಮೊಗವೀರರವರು ಪ್ರಾಸ್ತಾವಿಕ ಮಾತಾನಾಡಿ, ಸ್ವಾಗತಿಸಿದರು, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು. ಉಮೇಶ ನಾಯ್ಕ ವಂದಿಸಿದರು.

LEAVE A REPLY

Please enter your comment!
Please enter your name here