ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

0
250

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ) ದ-ಕ, ಉಡುಪಿ, ಕುಂದಾಪುರ, ಬೈಂದೂರು ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ವಲಯದ ಹಿರಿಯ ಛಾಯಾಗ್ರಾಹಕರಾದ ಜಗದೀಶ್ ಕಾಯ್ಕಿಣಿ, ಜಾರ್ಜ್ ಡೆಸಾ, ಶ್ರೀಧರ ಹೆಗ್ಡೆ ಇವರನ್ನು ಸನ್ಮಾನಿಸುದರ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ, ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ(skpa)ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಬಂಟ್ವಾಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಮಾಜಿ ಜಿಲ್ಲಾಸಂಚಾಲಕ ವಿಠಲ ಚೌಟ,ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಕೊರಿಯಾ, ಭರದ್ವಜ್ ,ಜಿಲ್ಲಾ ಕ್ರೀಡಾ ಕಾರ್ಯದರ್ಶಿ ನಾಗರಾಜ್ ರಾಯಪ್ಪನ‌ಮಠ, ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ , ನಿಯೋಜಿತ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ,ಕೋಶಾಧಿಕಾರಿ ಹರೀಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ ಮಠ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ರಾಘ ವಿಠಲವಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here