ಕೋಟ :48ನೇ ಸಾಧಕ ರೈತ ಪುರಸ್ಕಾರಕ್ಕೆ ಕೊಯ್ಕೂರು ಶಾರದ ಶೆಟ್ಟಿ ಆಯ್ಕೆ

0
654

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ “ರೈತರೆಡೆಗೆ ನಮ್ಮ ನಡಿಗೆ” ಮಾಲಿಕೆಗೆ ಇದೀಗ 48ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಆ.31ರ ಭಾನುವಾರ ಪೂರ್ವಾಹ್ನ 9.30ಕ್ಕೆ ನಡೆಯಲಿದ್ದು, ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಹಿರಿಯ ಸಾಧಕಿ ಕೊಯ್ಕೂರು ಶಾರದ ಶೆಟ್ಟಿ ಇವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here