ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟ ವಿದ್ಯಾರಣ್ಯದ ವಿದ್ಯಾರ್ಥಿಗೆ ಕಂಚಿನ ಪದಕ

0
219

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಕ್ರೀಡಾಕೂಟದ ಬಾಲಕರ 200 ಮೀ. ಓಟದ 17ರ ವಯೋಮಾನದ ವಿಭಾಗದ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪ್ರಥ್ವಿನ್ ಆರ್ ಮೊಗವೀರ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ ಪಡೆದಿದ್ದಾನೆ. ವಿಜೇತ ವಿದ್ಯಾರ್ಥಿಯು ರಾಘವೇಂದ್ರ ಮತ್ತು ಪ್ರತಿಮಾ ದಂಪತಿಯ ಪುತ್ರ.

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಅ.31ರಂದು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here