ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ :ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡಕ್ಕೆ ಪ್ರಥಮ ಸ್ಥಾನ

0
177

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ತಂಡದ ನಾಯಕ ಗಣೇಶ್ ಆರ್ , ಸದಸ್ಯರಾದ ನಿರೂಪ , ರೋಹಿತ್, ಯಶಸ್, ದಿಗಂತ , ಸುಬ್ರಮಣ್ಯ, ಸಚಿನ್, ಕಾರ್ತಿಕ ಈ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ವಿಜೇತರನ್ನು ಅಭಿನಂದಿಸಿ ಮಾತನಾಡಿದ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ನಲ್ಲಿ ಪಾಲ್ಗೊಂಡು ವಿಜಯ ಸಾಧಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು. ಪಠ್ಯದ ಜೊತೆಗೆ ಕ್ರೀಡೆಯಲ್ಲೂ ಪ್ರಗತಿ ಸಾಧಿಸಿರುವುದು ನಿಜಕ್ಕೂ ಸಂತಸ ತಂದಿದೆ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢತೆಯಿಂದ ಇರಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ. ನಮ್ಮ ಕಾಲೇಜಿ‌ನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದು ಶುಭಕೋರಿದರು.

ಈ ವೇಳೆ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ , ಉಪ ಕಾರ್ಯನಿರ್ವಹಣಾಧಿಕಾರಿ ಐ.ಎಚ್.ತುಂಬಿಗೆ, ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಲಿಂಗ ನಾಯ್ಕ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಸದಸ್ಯರುಗಳು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ ಬಿ , ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ , ತಂಡದ ವ್ಯವಸ್ಥಾಪಕರಾದ ನಾಗರಾಜ್ ಅಡಿಗ ನೀಲಾವರ ಮತ್ತು ತಂಡದ ತರಬೇತುದಾರರಾದ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚಿನಿ ಮತ್ತು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ರಾಜ್ಯಮಟ್ಟದ ನೆಟ್ ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ , ಕೀರ್ತನ ಸಿಗಂದೂರು , ಮಣಿಕಂಠ ಸಿಗಂದೂರು , ಗಣೇಶ ನಿಟ್ಟೂರು ನೀಡಿದರು. ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು , ಸಂಸ್ಥೆಯ ವಿದ್ಯಾರ್ಥಿಗಳು , ಹಳೆ ವಿದ್ಯಾರ್ಥಿಗಳು , ಊರವರು , ದೇವಳದ ಸಿಬ್ಬಂದಿಯವರು ಉಪಸ್ಥಿತರಿದ್ದು ಸಂತಸ ವ್ಯಕ್ತಪಡಿಸಿದರು.

ತದನಂತರ ತೆರೆದ ವಾಹನ ಮೂಲಕ ವಿಜೇತ ವಿದ್ಯಾರ್ಥಿಗಳನ್ನು ದೇವಸ್ಥಾನದಿಂದ ಮುಖ್ಯ ರಸ್ತೆ ಮೂಲಕ ಕಾಲೇಜಿನ ತನಕ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.

LEAVE A REPLY

Please enter your comment!
Please enter your name here