ಉಡುಪಿ ಪರ್ಯಾಯ: ಆನೆಗುಡ್ಡೆಯಿಂದ ಹೊರೆ ಕಾಣಿಕೆ ಸಮರ್ಪಣೆ

0
597

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಉಡುಪಿಯ ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವಕ್ಕೆ ಕುಂದಾಪುರ, ಬೈಂದೂರು, ಸಿದ್ಧಾಪುರ, ತ್ರಾಸಿ, ಕೋಟೇಶ್ವರ, ಕುಂಭಾಸಿ, ತೆಕ್ಕಟ್ಟೆ, ಉಳ್ತೂರು ವಲಯದಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.


ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆಯವರು ಬುಧವಾರ ಕುಂಭಾಸಿ ಆನೆಗುಡ್ಡೆ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಹಸಿರು ನಿಶಾನೆ ತೋರಿಸಿ ಹೊರೆ ಕಾಣಿಕೆಗೆ ಚಾಲನೆ ನೀಡಿದರು.

ಬೈಂದೂರು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ, ಆನೆಗುಡ್ಡೆ ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾದ್ಯಾಯ, ಪರ್ಯಾಯ ಹೊರೆಕಾಣಿಕೆ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಸ್ಥಳೀಯ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಅವಿನಾಶ್ ಉಳ್ತೂರು, ಅನಂತ ಕೃಷ್ಣ ಕೊಡ್ಗಿ, ಕುಂದಾಪುರ ಪುರಸಭಾ ಸದಸ್ಯರಾದ ಗಿರೀಶ್, ಸತೀಶ್ ಶೆಟ್ಟಿ, ಆನೆಗುಡ್ಡೆ ದೇವಳದ ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ವ್ಯವಸ್ಥಾಪಕ ನಟೇಶ್ ಕಾರಂತ್, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here