ಹೃದಯಾಘಾತ: ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

0
528

ರಾಘವೇಂದ್ರ ಅಡಿಗ ಎಚ್ಚೆನ್.

ಕುಂದಾಪುರ ಮಿರರ್ ಸುದ್ದಿ…
ಬೆಂಗಳೂರು :ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ ಜೋಸೈಮನ್‌ಗೆ ಹೃದಯಾಘಾತವಾಗಿದೆ. ಕೂಡಲೆೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜೋಸೈಮನ್ ನಿಧನರಾಗಿದ್ದಾರೆ. ವಿಷ್ಣುವರ್ಧನ್‌ಗೆ ‘ಸಾಹಸಸಿಂಹ’ ಬಿರುದು ನೀಡಿದ್ದ ಜೋಸೈಮನ್, ವಿಷ್ಣು, ಅಂಬರೀಶ್ ಸೇರಿದಂತೆ ಹಲವು ಖ್ಯಾತ ನಟರ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.
ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಅವರು ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೇವೆ ಸಲ್ಲಿಸಿ, ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದರು. 1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ಜೋ ಸೈಮನ್ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಮೊದಲ ಚಿತ್ರವೇ ಪ್ರೇಕ್ಷಕರ ಗಮನ ಸೆಳೆದಿದ್ದು, ನಂತರ ಅವರು ಆಕ್ಷನ್ ಹಾಗೂ ಪ್ರೇಮಕತೆಗಳ ಮೂಲಕ ಜನಪ್ರಿಯತೆ ಗಳಿಸಿದರು. ವಿಶೇಷವಾಗಿ ಆಕ್ಷನ್ ಶೈಲಿಯ ಚಿತ್ರಗಳಲ್ಲಿ ಅವರದೇ ಆದ ಸ್ಟೈಲ್ ಕಂಡುಬರುತ್ತಿತ್ತು.
ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದ ಚಿತ್ರಗಳನ್ನು ಜೋ ಸೈಮನ್ ನಿರ್ದೇಶಿಸಿದ್ದಾರೆ
ಜೋ ಸೈಮನ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಫಿಲ್ಮ್ ಚೇಂಬರ್ ಸದಸ್ಯರು, ಸಹ ನಿರ್ದೇಶಕರು, ನಟರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here