ಮೂಡ್ಲಕಟ್ಟೆ ಎಂಐಟಿಯಲ್ಲಿ ಯುವ ರಾಜ್ಯ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಿದ ಕಾಂತಾರ ಖ್ಯಾತಿಯ ಪ್ರಕಾಶ್ ತೂಮಿನಾಡು

0
156

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ಫೂರ್ತಿ ಇರಬೇಕು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪ್ರಯತ್ನ ಕೈಬಿಡಬಾರದು. ವಿದ್ಯಾರ್ಥಿಗಳಲ್ಲಿ ಗಟ್ಟಿತನ ಇರಬೇಕು. ನಮ್ಮ ಮೇಲೆ ನಂಬಿಕೆ, ವಿಶ್ವಾಸ ಇಟ್ಟುಕೊಂಡರೆ ನಮ್ಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಸೋಲೆ ಗೆಲುವಿನ ಮೆಟ್ಟಿಲು, ಇಲ್ಲಿ ಸೋಲಾದರೆ ಮತ್ತೊಮ್ಮೆ ಪ್ರಯತ್ನ ನಡೆಸಬೇಕು. ಇಂತಹ ವೇದಿಕೆಗಳು ನಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಗಳಾಗಬೇಕು ಎಂದು ಪ್ರಸಿದ್ಧ ಕಲಾವಿದ ಪ್ರಕಾಶ್ ತುಮ್ಮಿನಾಡು ಹೇಳಿದರು.

ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್ ಮತ್ತು ಕಲ್ಚರಲ್ ಫೆಸ್ಟ್ “ಯುವ 2026 ” ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಹೇಳಿದರು.

ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಅಕಾಡೆಮಿಕ್ ಡೈರೆಕ್ಟರ್ ಡಾ. ಎಸ್. ಎನ್. ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಂಐಟಿ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗಡೆ ಉಪಸ್ಥಿತರಿದ್ದರು.

ಇದೇ ಸಂದರ್ಭ ಕಲಾವಿದ ಪ್ರಕಾಶ್ ತುಮ್ಮಿನಾಡು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಡಿಪಾರ್ಟ್‍ಮೆಂಟ್ ಆಫ್ ಎಂಬಿಎ ಇದರ ಎಚ್‍ಒಡಿ ಡಾ.ಸುಚಿತ್ರಾ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅದಿತಿ ಶೆಟ್ಟಿ ಮತ್ತು ಶಾಂಭವಿ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here