ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರ ತಾಲ್ಲೂಕಿನ ಬಸ್ರೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಥಳೀಯ ಮಟ್ಟದಲ್ಲೇ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುವ ಉದ್ದೇಶದಿಂದ 1972ರಲ್ಲಿ ಶಾರದಾ ಕಾಲೇಜು ಟ್ರಸ್ಟ್ ವತಿಯಿಂದ ಸ್ಥಾಪಿತವಾದ ಬಸ್ರೂರು ಶ್ರೀ ಶಾರದಾ ಕಾಲೇಜು, ಕಳೆದ 54 ವರ್ಷಗಳಿಂದ ಯಶಸ್ವಿಯಾಗಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ.
2026-27ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಬಿ.ಕಾಂ, ಬಿಬಿಎ, ಬಿಸಿಎ ಮತ್ತು ಬಿ.ಎ ಪದವಿ ಕೋರ್ಸುಗಳಿಗೆ ಅವಕಾಶವಿದೆ. ಜೊತೆಗೆ ಸಿಎ ಮತ್ತು ಸಿಎಸ್ ಅಧ್ಯಯನಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ವರ್ಷದಿಂದ ತಾಂತ್ರಿಕ ಹಾಗೂ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ಕೋರ್ಸುಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯೂರಿಟಿ, ಡಾಟಾ ಅನಾಲಿಸಿಸ್, ಕ್ಲೌಡ್ ಕಂಪ್ಯೂಟಿಂಗ್, ಅವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‍ಂಟ್, ರಿಟೇಲ್ ಮ್ಯಾನೇಜ್‍ಂಟ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಕೋರ್ಸುಗಳನ್ನು ಪರಿಚಯಿಸಲಾಗಿದೆ. ರಾಷ್ಟ್ರೀಯ ಮಾನ್ಯತಾ ಮಂಡಳಿ (ನ್ಯಾಕ್) ಯಿಂದ ‘ಬಿ++’ ಮಾನ್ಯತೆ ಪಡೆದಿರುವ ಕಾಲೇಜಿನಲ್ಲಿ 17 ಅನುಭವಿ ಬೋಧಕ ಹಾಗೂ 13 ಬೋಧಕೇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕಾಲೇಜಿನಲ್ಲಿ ಸುಮಾರು 300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ತೊಡಗಿಕೊಂಡಿದ್ದಾರೆ
ಐದು ದಶಕಗಳ ಇತಿಹಾಸದಲ್ಲಿ ಕಾಲೇಜು ಶೈಕ್ಷಣಿಕ, ಸಾಹಿತ್ಯ, ಸಾಂಸ್ಕøತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸುತ್ತಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಂದಗನ್ನಡ ಅಧ್ಯಯನ ಪೀಠದ ವಿಸ್ತರಣಾ ಕೇಂದ್ರವನ್ನು ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಬಸ್ರೂರು ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ಗುರಿಯನ್ನು ಹೊಂದಲಾಗಿದ್ದು, 10 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು.
ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ವಿವಿಧ ರ್ಯಾಂಕ್‍ಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೀμï ಭಾμÁ ತರಬೇತಿ ಹಾಗೂ ಮಧ್ಯಾಹ್ನ ಉಚಿತ ಊಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಶಿಕ್ಷಣದ ಜೊತೆಗೆ ಶಿಕ್ಷಣೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾಹಿತ್ಯ, ಕ್ರೀಡೆ, ವಿಜ್ಞಾನ ಹಾಗೂ ಸಾಮಾಜಿಕ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿವೇತನದ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ನೀಡಲಾಗುತ್ತಿದೆ.
ಡಿಜಿಟಲ್ ಸೌಲಭ್ಯಗಳನ್ನು ವಿಸ್ತರಿಸುವ ಉದ್ದೇಶದಿಂದ ಅನುಪಮಾ ಎಸ್. ಶೆಟ್ಟಿ ಮತ್ತು ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ ಅವರ ಸಹಕಾರದಿಂದ ‘ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲನಿರ್ಂಗ್ ಸೆಂಟರ್’ ಸ್ಥಾಪಿಸಲಾಗಿದೆ. ವಿಶಾಲ ಗ್ರಂಥಾಲಯದಲ್ಲಿ 31,972ಕ್ಕೂ ಅಧಿಕ ಪುಸ್ತಕಗಳು, 25 ನಿಯತಕಾಲಿಕೆಗಳು, 10 ದಿನಪತ್ರಿಕೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಸಂಪನ್ಮೂಲ ಲಭ್ಯವಿದ್ದು, ಇ-ಲ್ಯಾಬ್ ತಂತ್ರಾಂಶ ಮತ್ತು ಬಾರ್‍ಕೋಡ್ ವ್ಯವಸ್ಥೆ ಜಾರಿಯಲ್ಲಿದೆ. ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಇತ್ತೀಚೆಗೆ ನಿಧನರಾದ ದಿ. ಬಸೂರು ಅಪ್ಪಣ್ಣ ಹೆಗ್ಡೆ ಅವರ ನಂತರ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾಗಿ ಅನುಪಮಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯ ಮಾರ್ಗದರ್ಶನದಲ್ಲಿ ನೂತನ ಪ್ರಾಂಶುಪಾಲ ಡಾ.ದಯಾನಂದ ಎನ್. ಬಾಯರ್ ನೇತೃತ್ವದಲ್ಲಿ ಕಾಲೇಜನ್ನು ಮತ್ತಷ್ಟು ಅಗ್ರಸ್ಥಾನಕ್ಕೆ ಏರಿಸುವ ಕಾರ್ಯಯೋಜನೆ ರೂಪಿಸಲಾಗಿದೆ.
ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳೊಂದಿಗೆ ವೃತ್ತಿಪರ ತರಬೇತಿ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ದೂರದ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ಸೌಲಭ್ಯವೂ ಲಭ್ಯವಿದೆ. ಸುಸಜ್ಜಿತ ಕಟ್ಟಡ, ಆಧುನಿಕ ಕಂಪ್ಯೂಟರ್ ಲ್ಯಾಬ್, ವಿಶಾಲ ಕ್ರೀಡಾಂಗಣ ಮತ್ತು ಮಾಲಿನ್ಯರಹಿತ ಪರಿಸರ ಹೊಂದಿರುವ ಈ ಕಾಲೇಜನ್ನು ಜಿಲ್ಲೆಯ ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿಸುವ ದಿಶೆಯಲ್ಲಿ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿನ ತಜ್ಞರು ಹಾಗೂ ಅನುಭವಿಗಳ ಮಾರ್ಗದರ್ಶನ ಪಡೆದುಕೊಂಡು, ಅನೇಕ ಉನ್ನತೀಕರಣದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜಿನ ಸಂಚಾಲಕಿ ಅನುಪಮಾ ಎಸ್.ಶೆಟ್ಟಿ ಮತ್ತು ಟ್ರಸ್ಟಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.
ಬಸ್ರೂರು ಶಾರದಾ ಕಾಲೇಜು ಮಹತ್ತರ ಬದಲಾವಣೆಯೊಂದಿಗೆ ಪದವಿ ಶಿಕ್ಷಣ: ಸಿಎ ಮತ್ತು ಸಿಎಸ್ ಅಧ್ಯಯನಕ್ಕೂ ಅವಕಾಶ: ಕೌಶಲ್ಯಾಭಿವೃದ್ಧಿ ಕೋರ್ಸುಗಳಿಗೆ ಅವಕಾಶ – ಅನುಪಮ ಎಸ್.ಶೆಟ್ಟಿ.

Leave a Reply Cancel reply